ಶೆಲೆಮ್ಯನಿಗೆ ಪೂರ್ವದಿಕ್ಕಿನ ಬಾಗಿಲನ್ನು ಕಾಯುವ ಜವಾಬ್ದಾರಿ ದೊರೆಯಿತು; ಅವನ ಮಗನಾದ ಜೆಕರ್ಯನಿಗೆ ಉತ್ತರ ದಿಕ್ಕಿನ ಬಾಗಿಲನ್ನು ಕಾಯುವ ಜವಾಬ್ದಾರಿ ದೊರೆಯಿತು. ಇವನು ಒಳ್ಳೆಯ ಸಲಹೆಗಾರನಾಗಿದ್ದನು.
ಶುಪ್ಪೀಮ್ ಮತ್ತು ಹೋಸ ಎಂಬವರಿಗೆ ಪಶ್ಚಿಮದ ಬಾಗಿಲನ್ನು ಮತ್ತು ಮೇಲ್ದಾರಿಯಲ್ಲಿದ್ದ ಶೆಲ್ಲೆಕೆತ್ ಬಾಗಿಲನ್ನು ಕಾಯುವ ಕೆಲಸ ದೊರೆಯಿತು. ಕಾವಲುಗಾರರು ಪಕ್ಕಪಕ್ಕದಲ್ಲಿಯೇ ನಿಂತುಕೊಳ್ಳುತ್ತಿದ್ದರು.
ಪ್ರತಿದಿನ ಪೂರ್ವದಿಕ್ಕಿನ ಬಾಗಿಲಿನಲ್ಲಿ ಆರು ಮಂದಿ ಲೇವಿಯರು ಕಾವಲಿಗಿದ್ದರು; ಉತ್ತರದಿಕ್ಕಿನ ಬಾಗಿಲಿನಲ್ಲಿ ಪ್ರತಿದಿನ ನಾಲ್ಕು ಮಂದಿ ಲೇವಿಯರು ಕಾವಲಿಗಿದ್ದರು; ದಕ್ಷಿಣದ ಬಾಗಿಲಿನಲ್ಲಿ ನಾಲ್ಕು ಮಂದಿ ಲೇವಿಯರು ಕಾವಲಿಗಿದ್ದರು; ಇಬ್ಬರು ಲೇವಿಯರು ಬೆಲೆಬಾಳುವ ವಸ್ತುಗಳ ಕೋಣೆಗೆ ಕಾವಲಾಗಿದ್ದರು.
ದಾವೀದನು ದೇವಾಲಯಕ್ಕೋಸ್ಕರ ಸಂಗ್ರಹಿಸಿದ ಎಲ್ಲಾ ವಸ್ತುಗಳಿಗೆ ಶೆಲೋಮೋತನೂ ಅವನ ಸಂಬಂಧಿಕರೂ ಅಧಿಕಾರಿಗಳಾಗಿದ್ದರು. ಸೈನ್ಯಾಧಿಕಾರಿಗಳು ದೇವಾಲಯವನ್ನು ಕಟ್ಟಲು ಸಾಮಾಗ್ರಿಗಳನ್ನು ಒದಗಿಸಿದರು.
ಶೆಲೋಮೋತ್ ಮತ್ತು ಅವನ ಸಂಬಂಧಿಕರೂ ಪ್ರವಾದಿಯಾದ ಸಮುವೇಲನೂ ಕೀಷನ ಮಗನಾದ ಸೌಲನೂ ನೇರನ ಮಗನಾದ ಅಬ್ನೇರನೂ ಚೆರೂಯಳ ಮಗನಾದ ಯೋವಾಬನೂ ದೇವರಿಗೆಂದು ಕೊಟ್ಟಿದ್ದ ಪವಿತ್ರವಸ್ತುಗಳ ಮೇಲ್ವಿಚಾರಕರಾಗಿದ್ದರು.
ಹಷಬ್ಯನು ಹೆಬ್ರೋನ್ ಸಂತಾನದವನಾಗಿದ್ದನು. ಇವನೂ ಇವನ ಸಂಬಂಧಿಕರೂ ಜೋರ್ಡನ್ ನದಿಯ ಪಶ್ಚಿಮ ಪ್ರಾಂತ್ಯದಲ್ಲಿ ಯೆಹೋವನ ಸೇವೆಗೂ ಅರಸನ ಕಾರ್ಯಕ್ಕೂ ಅಧಿಕಾರಿಗಳಾಗಿದ್ದರು. ಹಷಬ್ಯನ ವರ್ಗದಲ್ಲಿ ಒಟ್ಟು ಒಂದು ಸಾವಿರದ ಏಳುನೂರು ಮಂದಿ ಸಾಮರ್ಥ್ಯಶಾಲಿಗಳಿದ್ದರು.
ಹೆಬ್ರೋನ್ ಸಂತಾನದ ಚರಿತ್ರೆಗನುಸಾರವಾಗಿ ಯೆರೀಯನು ಅವರ ಅಧಿಪತಿಯಾಗಿದ್ದನು. ದಾವೀದನು ನಲವತ್ತು ವರ್ಷ ಇಸ್ರೇಲಿನ ಅರಸನಾಗಿದ್ದ ಕಾಲದಲ್ಲಿ ತನ್ನ ಜನರ ಚರಿತ್ರೆಯನ್ನು ಕಂಡುಹಿಡಿದು ದಾಖಲೆ ಮಾಡಲು ಆಜ್ಞೆಯಿತ್ತಿದ್ದನು. ಗಿಲ್ಯಾದಿನ ಯಾಜೇರ್ ಎಂಬಲ್ಲಿ ಹೆಬ್ರೋನ್ ಸಂತಾನಕ್ಕೆ ಸೇರಿದವರಲ್ಲಿ ಬಹಳ ಮಂದಿ ಅನುಭವಶಾಲಿಗಳಾದ ಕಾರ್ಮಿಕರು ದೊರಕಿದರು.
ಯೆರೀಯನಿಗೆ ಎರಡು ಸಾವಿರದ ಏಳುನೂರು ಮಂದಿ ಸಂಬಂಧಿಕರಿದ್ದರು. ಇವರೆಲ್ಲಾ ಬಲಾಢ್ಯರೂ ಕುಟುಂಬಕ್ಕೆ ನಾಯಕರುಗಳೂ ಆಗಿದ್ದರು. ದಾವೀದನು ಇವರೆಲ್ಲರಿಗೂ ರೂಬೇನ್, ಗಾದ್, ಅರ್ಧಮನಸ್ಸೆಯವರ ಪ್ರಾಂತ್ಯಗಳಲ್ಲಿ ಯೆಹೋವನಿಗೆ ಸಂಬಂಧಿಸಿದ ಕಾರ್ಯಗಳನ್ನು, ರಾಜನಿಗೆ ಸಂಬಂಧಿಸಿದ ಕಾರ್ಯಗಳನ್ನು ಮಾಡಲು ನೇಮಕ ಮಾಡಿದನು.